Original MSS of SIRIBHUVALAYA available at Germany ??
This is to the viewers of GERMONY.
As per the reliable source information SIRIBHUVALAYA or Siribhuvalay original MSS are available at GERMANY
Requested to verify and inform to this blog in the interest of SIRIBHUVALAYA readers.
ಕುಮುದೇಂದು ಮುನಿ ರಚಿಸಿದ ಸಿರಿಭೂವಲಯ ಗ್ರಂಥದ ಆಧಾರದಿಂದ ಕನ್ನಡ ಭಾಷೆ ಗುಪ್ತಭಾಷೆಯಾಗಿದ್ದಿತು(ಬ್ರಹ್ಮರ್ಷಿ ದೇವರಾತರ ಪ್ರಕಾರ ವೇದ ಕಾಲದಿಂದಲೂ ೪ ಗುಪ್ತ ಭಾಷೆಗಳಿವೆಯಂತೆ ಅದರಲ್ಲಿ ಕನ್ನಡ ಭಾಷೆಯೂ ಒಂದು ಎಂದು ಅನಿಸುತ್ತದೆ) ಸೊನ್ನೆಯಿಂದಲೇ ಎಲ್ಲಾ ಅಂಕೆಗಳನ್ನು ಮತ್ತು ಅಕ್ಷರಗಳನ್ನು ಸೃಷ್ಟಿಸಲಾಯಿತು ಮತ್ತು ಕನ್ನಡ ಭಾಷೆಗೆ ವಿಶ್ವದ ಎಲ್ಲಾ ಭಾಷೆಗಳನ್ನು ಅಡಗಿಸಿಕೊಳ್ಳುವ ಶಕ್ತಿ ಇದೆ ಎಂದು ಕುಮುದೇಂದು ಮುನಿಯು ತನ್ನ ಗ್ರಂಥದಲ್ಲಿ ಸಾಬೀತು ಮಾಡಿದ್ದಾರೆ.
- "ಆದಿ ತೀರ್ಥಂಕರ ವೃಷಭ ದೇವನು ತನ್ನ ಕುಮಾರಿಯಾದ ಬ್ರಾಹ್ಮೀ ಸೌಂದರಿಯರಿಗೆ ಕನ್ನಡ ಆಂಕಾಕ್ಷರ ಗಳನ್ನು ವಿವರಿಸಿದ ಕಾರಣದಿಂದಾಗಿ ಈ ಅಕ್ಷರ ಲಿಪಿಗೆ ಬ್ರಾಹ್ಮೀಲಿಪಿ ಎಂದು ಅಂಕ ಲಿಪಿಗೆ ಸೌಂದರಿ ಲಿಪಿ ಎಂದು ಹೆಸರಾಗಿದೆ. ಈ ಖಚಿತವಾದ ಮಾಹಿತಿ ಯನ್ನು ಸಿರಿ ಭೂ ವಲಯವು ಬಹಳ ಸ್ಪಷ್ಟವಾಗಿ ತಿಳಿಸಿದೆ. ಕನ್ನಡ ಭಾಷೆಯೂ ಈಗ ವ್ಯಾಪಾರಿ ರಂಗದಲ್ಲೂ ಮುಂಚೂಣಿ ಭಾಷೆಯಾಗಿ ಬೆಳೆಯುತ್ತಿದೆ.
ಉದಾಹರಣೆಗೆ:
ಣಿಚ್ಚವು ಹೊಸದಾಗಿರುವಂಕಾಕ್ಷರ ದಚ್ಚುಗಳೊಳಗೊಂಬತ್ತು ಣೊಚ್ಚಿತ್ತು ಬಿನ್ನತ್ತಾಗಿರುತರುವಂಕದ ಅಚ್ಚಕಾವ್ಯಕೆ ಸೊನ್ನೆಯಾದಿಮ್
ನುಣುಪಾದ ಸೊನ್ನೆಯ ಮಧ್ಯದೊಳ್ ಕೂಡಿಸೆ ಗಣಿತರ್ಗೆ ಲೆಕ್ಕವ ತರುವ ಅಣಿಯಾದ ಸೊನ್ನೆಗೆ ಮಣಿಯುತ ನಾನೀಗ ಗುಣಕರ್ಗೆ ಭೂವಲಯವನು
ವರುಷಭಾರತದೊಳು ಬೆಳಗುವೆತ್ತಿಹ ಕಾವ್ಯ ಕರುನಾಡ ಜನರಿಗನಾದಿ ಅರುಹನಾಗಮದೊಂದಿಗೆ ನಯ ಬರುವಂತೆ ವರಕಾವ್ಯವನ್ನು ಕನ್ನದಿಪೆ
ಪುರ ಜಿನನಾಥ ತನ್ನಂಕದೊಳ್ ಬ್ರಾಹ್ಮಿಗೆ ಅರವತ್ನಾಲ್ಕಕ್ಷರವಿತ್ತ ವರಕುವರಿಯರು ಸೌಂದರಿಗೆ ಒಂಬತ್ತನು ಕರುಣಿಸಿದನು ಸೊನ್ನೆ ಸಹಿತ
ಕನ್ನಡದೊಂದೆರಳ್ ಮೂರುನಾಲ್ಕೈದಾರು ಮುನ್ನ ಏಳೆಂಟೊಂಬತೆಂಬ ಉನ್ನತವಾದಂಕ ಸೊನ್ನೆಯಿಂ ಹುಟ್ಟಿತೆಂ ದೆನ್ನುವುದನು ಕಲಿಸಿದನು
ಸರ್ವಞದೇವನು ಸರ್ವಾಂಗದಿಂ ಪೇಳ್ದ ಸರ್ವಸ್ವ ಭಾಷೆಯ ಸರಣಿಗೆ ಸಕಲವ ಕರ್ಮಾಟದಣುರೂಪ ಹೊಂದುತ ಪ್ರಕಟದ ಓಂದರೋಳ್ ಅಡಗಿ
ಹದಿನೆಂಟು ಭಾಷೆಯ ಮಹಾಭಾಷೆಯಾಗಲು ಬದಿಯ ಭಾಷೆಗಳೇಳುನೂರು ಹೃದಯದೊಳಡಗಿಸಿ ಕರ್ಮಾಟ ಲಿಪಿಯಾಗಿ ಹುದುಗಿದಂಕ ಭೂವಲಯ
ಪರಭಾಷೆಗಳೆಲ್ಲ ಸಂಯೋಗವಾಗಲು ಸರಸ ಶಬ್ದಾಗಮ ಹುಟ್ಟಿ ಸರವದು ಮಾಲೆಯಾದತಿಶಯ ಹಾರದ ಸರಸ್ವತಿ ಕೊರಳ ಆಭರಣ
source:wikipedia kannada
source:wikipedia kannada
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ